ಡಿಸೆಂಬರ್ 11, 2024

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು 'ಶ್ರೀ ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್' ನ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

 ಈ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷರಾದ ನಂಜಪ್ಪಅವರು ಮಾತನಾಡಿದರು. 

  ಶ್ರೀ ಮಡಿವಾಳ ಮಾಚಿ ದೇವರ ಜಯಂತೋತ್ಸವದ ಪ್ರಯುಕ್ತ ಬೆಂಗಳೂರಿನ ಆದಿಚುಂಚನಗಿರಿ ಸಮುದಾಯ ಭವನದಲ್ಲಿ 2025ರ ಏಪ್ರಿಲ್ 14ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ನಂಜಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.

 ಈ ಪತ್ರಿಕಾಗೋಷ್ಠಿಯಲ್ಲಿ ಮಡಿವಾಳರ ಜಾಗೃತಿ ವೇದಿಕೆ ಟ್ರಸ್ಟ್ ನ ಅಧ್ಯಕ್ಷರಾದ ಆರ್ ಮಂಜುನಾಥ ಅವರು ಭಾಗವಹಿಸಿದ್ದರು.