ಬೆಂಗಳೂರಿನ ರಾಜರಾಜೇಶ್ವರಿ ದಂತ ವೈದ್ಯಕೀಯ ಮಹಾವಿದ್ಯಾಲಯದ "28ನೇ ಘಟಿಕೋತ್ಸವ ಸಮಾರಂಭ" ಡಿಸೆಂಬರ್ 16ರಂದು ನಡೆಯಲಿದೆ.
ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿನ ಆವರಣದಲ್ಲಿನ ಎ.ಸಿ.ಎಸ್ ಕನ್ವೆನ್ಷನ್ ಹಾಲ್ ನಲ್ಲಿ ಪದವಿ ಪ್ರದಾನ ಸಮಾರಂಭ ನಡೆಯಲಿದೆ.
ಘಟಿಕೋತ್ಸವ ಸಮಾರಂಭವು ಸಂಸ್ಥಾಪಕ ಕುಲಪತಿಗಳಾದ ಡಾ|| ಎ. ಸಿ. ಷಣ್ಮುಗಂ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ರಾಜೀವ್ ಗಾಂಧಿ ಅರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಎಂ. ಕೆ. ರಮೇಶ ಅವರು ಪದವಿ ಪ್ರದಾನ ಸಮಾರಂಭವನ್ನು ಉದ್ಘಾಟನೆ ಮಾಡಲಿದ್ದಾರೆ.
ರಾಜರಾಜೇಶ್ವರಿ ಸಮೂಹ ಸಂಸ್ಥೆಗಳ ಟ್ರಸ್ಟಿಯಾದ ಲಲಿತಾ ಲಕ್ಷ್ಮಿ ಅವರು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಚಿತ್ರನಟಿ ಬೃಂದಾ ಆಚಾರ್ಯ,
ಹಿನ್ನಲೆ ಗಾಯಕಿ ಶಮಿತಾ ಮಲ್ನಾಡ್ ಅವರು ಭಾಗಿಯಾಗಲಿದ್ದಾರೆ.