ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಇಂದು ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿಯ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ರೈತರ ವಿವಿಧ ಸಮಸ್ಯೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಡಿಸೆಂಬರ್ 16ರಂದು ಬೆಳಗಾವಿಯ ರೈತ ಸರ್ಕಲ್ ನಿಂದ ಸುವರ್ಣಸೌಧದ ವರೆಗೆ ಬೃಹತ್ ಪಾದಯಾತ್ರೆ ನಡೆಯಲಿದೆ ಎಂದು ತಿಳಿಸಿದರು.
ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಹಾಗೂ ಪಚ್ಚೆ ನಂಜುಂಡಸ್ವಾಮಿಯವರ ಗೌರವ ಉಪಸ್ಥಿತಿಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.