ಬೆಂಗಳೂರಿನ ಗಾಂಧಿ ಭವನದಲ್ಲಿ 'ಅಖಿಲ ಕರ್ನಾಟಕ ಹಂದಿ ಜೋಗಿ ಸಂಘ'ದ ರಾಜ್ಯ ಸಮಿತಿಯ ಪದಾಧಿಕಾರಿಗಳ "ವಾರ್ಷಿಕ ಮಹಾಸಭೆ" ನಡೆಯಿತು.
ಈ ಸಭೆಯಲ್ಲಿ ರಾಜ್ಯದಲ್ಲಿನ ಹಂದಿ ಜೋಗಿ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು.
ಪದಾಧಿಕಾರಿಗಳ ವಾರ್ಷಿಕ ಮಹಾಸಭೆಯು ರಾಜ್ಯಾಧ್ಯಕ್ಷರಾದ ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ನಡೆಯಿತು.