ಜನವರಿ 1, 2025
ಬೆಂಗಳೂರಿನ ಕಾನಿಷ್ಕಾ ಹೋಟೆಲ್ ನಲ್ಲಿ ಇಂದು ಕರ್ನಾಟಕ ಅಹಿಂದ ಹೋರಾಟ ಸಮಿತಿ ವತಿಯಿಂದ 'ಭೀಮಾ ಕೋರೆಗಾಂವ್ ವಿಜಯೋತ್ಸವ -2025' ಕಾರ್ಯಕ್ರಮ ನಡೆಯಿತು.
'ಭೀಮಾ ಕೋರೆಗಾಂವ್ ವಿಜಯೋತ್ಸವ -2025' ಕಾರ್ಯಕ್ರಮದಲ್ಲಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ ಅವರಿಗೆ "ಭೀಮಸೇನಾನಿ ಪ್ರಶಸ್ತಿ" ನೀಡಿ ಗೌರವಿಸಲಾಯಿತು.
ಈ ಕಾರ್ಯಕ್ರಮವು ರಾಜ್ಯಾಧ್ಯಕ್ಷರಾದ ಎಂ. ಮುತ್ತುರಾಜು ಅವರ ನೇತೃತ್ವದಲ್ಲಿ ನಡೆಯಿತು.
ಭೀಮಾ ಕೋರೆಗಾಂವ್ ವಿಜಯೋತ್ಸವ ಗೀತನಮನ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಬಿ.ಟಿ. ಲಲಿತಾ ನಾಯಕ್, ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷರಾದ ಡಾ.ಎಂ.ವೆಂಕಟಸ್ವಾಮಿ, ದಲಿತ ಹೋರಾಟಗಾರ ಬಿ. ಆರ್. ಮುನಿರಾಜ್ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.