ಜನವರಿ 2, 2024
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಆನೇಕಲ್ ಡಾ. ಬಿ.ಆರ್. ಅಂಬೇಡ್ಕರ್ ಯುವಕರ ಸಂಘ'ದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಎಂ. ಮರಸೂರು ಕೃಷ್ಣಪ್ಪ ಅವರು ಮಾತನಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ಹಿರಿಯ ಬಾಲಕರ ಶಾಲೆಯ ಆವರಣದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಎಸಗಿದ್ದಾರೆ ಎಂದು ಎಂ. ಮರಸೂರು ಕೃಷ್ಣಪ್ಪ ಅವರು ಆರೋಪಿಸಿದರು.
ಈ ಕೂಡಲೇ ಡಾ. ಆರ್. ಅಂಬೇಡ್ಕರ್ ಪ್ರತಿಮೆಗೆ ಸುತ್ತಿರುವ ಬಟ್ಟೆಯನ್ನು ತೆರವುಗೊಳಿಸಬೇಕೆಂದು ಎಂ. ಮರಸೂರು ಕೃಷ್ಣಪ್ಪ ಅವರು ಒತ್ತಾಯಿಸಿದರು.