ಬೆಂಗಳೂರು, ಜನವರಿ 8, 2025:
ಜನವರಿ 10ರಂದು ವೈಕುಂಠ ಏಕಾದಶಿ ಹಬ್ಬವಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಬಸವನಗುಡಿಯ ಶ್ರೀ ಸಾಯಿ ಪಾರ್ಟಿ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರವಣ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂಎಲ್ಸಿ ಶ್ರೀ ಶರವಣ ಅವರು ಶ್ರೀ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ಲಡ್ಡು ಪ್ರಸಾದ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶರವಣ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಂಎಲ್ಸಿ ಶ್ರೀ ಶರವಣ ಅವರು ಮಾಧ್ಯಮಗಳ ಜತೆಗೆ ಮಾತನಾಡಿದರು. ವೈಕುಂಠ ಏಕಾದಶಿ ಪ್ರಯುಕ್ತ ಪ್ರತಿ ವರ್ಷ ಬೆಂಗಳೂರಿನ ಶ್ರೀ ವೆಂಕಟೇಶ್ವರ ದೇವಾಲಯಗಳಿಗೆ ಶರವಣ ಚಾರಿಟಬಲ್ ಟ್ರಸ್ಟ್ ವತಿಯಿಂದ 1 ಲಕ್ಷ ಲಡ್ಡು ಪ್ರಸಾದ ವಿತರಣೆ ಮಾಡಲಾಗುತ್ತದೆ. ಅದೇ ರೀತಿ ಈ ವರ್ಷವೂ ಕೂಡ ಒಂದು ಲಕ್ಷ ಲಡ್ಡುಗಳನ್ನು ಭಕ್ತಾದಿಗಳಿಗೆ ವಿತರಿಸಲಾಗುವುದು ಎಂದು ಶರಣ ಅವರು ತಿಳಿಸಿದರು.
ತಿರುಪತಿಯ ತಿರುಮಲ ದೇವಸ್ಥಾನದಲ್ಲಿ ಮಾಡುವ ರೀತಿಯಲ್ಲಿ ನಂದಿನಿ ತುಪ್ಪವನ್ನು ಬಳಸಿ ಉತ್ಕೃಷ್ಟ ಗುಣಮಟ್ಟದಲ್ಲಿ ಲಡ್ಡು ಪ್ರಸಾದ ತಯಾರಿಸಲಾಗಿದೆ. ಬೆಂಗಳೂರಿನ ಎಲ್ಲಾ ವೆಂಕಟೇಶ್ವರ ದೇವಾಲಯಗಳು ಹಿಂದೂ ಮತ್ತು ನಾಳೆ ಲಡ್ಡು ಪ್ರಸಾದವನ್ನು ಕಳುಹಿಸಿ ಕೊಡಲಾಗುವುದು ಎಂದು ಶರವಣ ಅವರು ತಿಳಿಸಿದರು. ವೈಕುಂಠ ಏಕಾದಶಿ ದಿನದಂದು ವೆಂಕಟೇಶ್ವರ ದೇವಾಲಯಗಳಿಗೆ ಭೇಟಿ ನೀಡುವ ಭಕ್ತರಿಗೆ ನಾವು ತಯಾರಿಸಿರುವ ಲಡ್ಡು ಸಿಗಲಿದೆ ಎಂದು ಶರವಣ ಅವರು ಮಾಧ್ಯಮಗಳಿಗೆ ತಿಳಿಸಿದರು.