ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ 'ವಾಲ್ಮೀಕಿ, ದಲಿತ ಸಂಘಟನೆಗಳು ಹಾಗೂ ಶ್ರೀರಾಮುಲು ಅಭಿಮಾನಿಗಳ ಬಳಗದಿಂದ ಮಹತ್ವದ ಪತ್ರಿಕಾಗೋಷ್ಠಿ ನಡೆಯಿತು.
ಮಾಜಿ ಸಚಿವ ಶ್ರೀರಾಮುಲು ಅವರನ್ನು ಬೆಂಬಲಿಸಿ ಪತ್ರಿಕಾಗೋಷ್ಠಿ ನಡೆಯಿತು.
ಈ ಪತ್ರಿಕಾಗೋಷ್ಠಿಯಲ್ಲಿ ವಾಲ್ಮೀಕಿ ಸಮುದಾಯದ ಪ್ರಮುಖರಾದ ಚಳುವಳಿ ರಾಜಣ್ಣ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.
ಮಾಜಿ ಸಚಿವ ಶ್ರೀರಾಮುಲು ಅವರು ವಾಲ್ಮೀಕಿ ಸಮುದಾಯದ ಬಹುದೊಡ್ಡ ನಾಯಕರಾಗಿದ್ದಾರೆ. ಗಂಗಾವತಿ ಶಾಸಕರಾದ ಜನಾರ್ದನ ರೆಡ್ಡಿ ಅವರು ಶ್ರೀರಾಮುಲು ಅವರು ಬಗ್ಗೆ ಮನಬಂದಂತೆ ಮಾತಾಡುತ್ತಿದ್ದಾರೆ. ಶ್ರೀರಾಮುಲು ಅವರ ತೇಜೋವದೆಗೆ ಯಥಾನಿಸುತ್ತಿದ್ದಾರೆ ಎಂದು ಆರೋಪಿಸಿದರು.
ಜನಾರ್ದನ ರೆಡ್ಡಿ ಅವರು ತಕ್ಷಣವೇ ವಾಲ್ಮೀಕಿ ಸಮುದಾಯಕ್ಕೆ ಹಾಗೂ ಶ್ರೀರಾಮುಲು ಅವರಲ್ಲಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು.
20 ವರ್ಷದಿಂದ ಬಿಜೆಪಿ ಪಕ್ಷಕ್ಕೆ ಅವಿರತವಾಗಿ ದುಡಿದಿರುವ ಶ್ರೀರಾಮುಲು ಅವರಿಗೆ ಕೇಂದ್ರ ಸಚಿವ ಸ್ಥಾನವಾಗಲಿ, ಎಂ.ಎಲ್.ಸಿ ಸ್ಥಾನವಾಗಲಿ ನೀಡಬೇಕೆಂದು ಚಳುವಳಿ ರಾಜಣ್ಣ ಅವರು ಒಟ್ರಾಯಿಸಿದರು.