ಬೆಂಗಳೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ 'ದಿ ಬೆಂಗಳೂರು ಗನ್ನಿ ಮರ್ಚೆಂಟ್ಸ್ ಅಸೋಸಿಯೇಷನ್' ನ ಸರ್ವ ಸದಸ್ಯರ ವಾರ್ಷಿಕ ಸಭೆ ನಡೆಯಿತು. ನಮ್ಮ ಅಸೋಸಿಯೇಷನ್ 50 ವರ್ಷಗಳನ್ನು ಪೂರೈಸಿದ್ದು 51ನೇ ವರ್ಷಕ್ಕೆ ಕಾಲಿಡುತ್ತಿದೆ. ನಮ್ಮ ಅಸೋಸಿಯೇಷನ್ ಎಲ್ಲಾ ಸದಸ್ಯರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದಾರೆ.
ಅಸೋಸಿಯೇಷನ್ ಬೈಲಾ ಪ್ರಕಾರ ಇನ್ನು ಕೆಲವೇ ತಿಂಗಳುಗಳಲ್ಲಿ ಅಸೋಸಿಯೇಷನ್ ಚುನಾವಣೆ ನಡೆಯಲಿದೆ ಎಂದುಮಾಜಿ ಜಂಟಿ ಕಾರ್ಯದರ್ಶಿಯಾದ ವಿಜಯ್ ಕುಮಾರ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಸರ್ವ ಸದಸ್ಯರ ವಾರ್ಷಿಕ ಸಭೆಯಲ್ಲಿ ಶೇಕಡಾ 90ಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಿದ್ದರು. ಅಸೋಸಿಯೇಷನ್ ಸರ್ವತೋಮುಖ ಅಭಿವೃದ್ಧಿಗೆ ಎಲ್ಲ ಸದಸ್ಯರು ಶ್ರಮಿಸುವುದಾಗಿ ತಿಳಿಸಿದರು.