ಬೆಂಗಳೂರು, ಫೆಬ್ರವರಿ 6, 2025

 ಕರ್ನಾಟಕ ರಾಜ್ಯಸರ್ಕಾರಿ NPS ನೌಕರರ ಸಂಘವು ದಿನಾಂಕ:13.10.2022 ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆಯನ್ನು ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಪ್ರೀಡಂ ಪಾರ್ಕ್‌ಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು ಹಾಗೂ ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನವನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು NPS ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಾಗಿತ್ತು.

ಮುಂದುವರೆದು, ಮಾನ್ಯ ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ತಕ್ಷಣ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ:13.06.2023 ರಂದು ಗೃಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಸಭೆ ನಡೆಸಿ ಭರವಸೆಯನ್ನು ನೀಡಲಾಗಿತ್ತು. ಮುಂದುವರೆದು, ತಾವು ಸಹ ನಮ್ಮ ಸಂಘಟನೆಯೊಂದಿಗೆ ಸಭೆ ನಡೆಸಿ NPS ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ತಿಳಿಸಿರುತ್ತಾರೆ. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಈ ಹಿನ್ನೆಲೆಯಲ್ಲಿ, ದಿನಾಂಕ:19.01.2025 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯು "ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, NPS ಯೋಜನೆಯನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವಂತೆ, ದಿನಾಂಕ:07.02.2025 ರಂದು ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ 'OPS ಹಕ್ಕೊತ್ತಾಯ' ಧರಣಿ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಂಡಿರುತ್ತದೆ."