ಬೆಂಗಳೂರು ಫೆಬ್ರವರಿ 7, 2025:

 ಕರ್ನಾಟಕ ರಾಜ್ಯ ಸರ್ಕಾರಿ NPS ಎನ್ ಪಿ ಎಸ್ ನೌಕರರ ಸಂಘದ ವತಿಯಿಂದ ಎನ್ ಪಿ ಎಸ್ ಯೋಜನೆಯ ರದ್ದತಿಗೆ ಒತ್ತಾಯಿಸಿ, ಓಪಿಎಸ್ ಜಾರಿ ಹಕ್ಕೊತ್ತಾಯ ಬೃಹತ್ ಧರಣಿ ಕಾರ್ಯಕ್ರಮ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಯಿತು. 

 ಎನ್ ಪಿ ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತರಾಮ್, ಕರ್ನಾಟಕ ರಾಜ್ಯ ಸರ್ಕಾರಿ ಎನ್ ಪಿ ಎಸ್ ನೌಕರರ ಸಂಘ 2022 ಅಕ್ಟೋಬರ್‌ ನಿಂದ ಒಂದು ತಿಂಗಳು ಹಳೆಯ ಪಿಂಚಣಿ ಯೋಜಾನಾ ಜಾರಿ ಸಂಕಲ್ಪ ಯಾತ್ರೆ ಹಾಗೂ ಫೆಬ್ರವರಿಯಲ್ಲಿ 14 ದಿನಗಳ ಕಾಲ ಒಪಿಎಸ್ ಜಾರಿಗಾಗಿ ಪ್ರೀಡಂ ಪಾರ್ಕ್‌ಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು, ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನವನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು NPS ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ನೀಡಿತ್ತು ಎಂದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರ ವಹಿಸಿಕೊಂಡ ತಕ್ಷಣ ಎನ್ ಪಿ ಎಸ್ ಪದಾಧಿಕಾರಿಗಳೊಂದಿಗೆ 2023 ಜೂನ್ 13ರಂದು ಸಭೆ ನಡೆಸಿ ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರು ಸಭೆ ನಡೆಸಿ ಎನ್ ಪಿಎಸ್ ರದ್ದು ಪಡಿಸುವ ಬಗ್ಗೆ ಭರವಸೆ ನೀಡಿದ್ದರು, ಆದರೆ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ಜನವರಿ 19,2025 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ "ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಎನ್ ಪಿಎಸ್ ಯೋಜನೆಯನ್ನು ರದ್ದುಗೊಳಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು.ಈ ಹಿನ್ನಲೆಯಲ್ಲಿ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ 'OPS ಹಕ್ಕೊತ್ತಾಯ' ಧರಣಿ ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.