ಬೆಂಗಳೂರು, ಫೆಬ್ರವರಿ 08, 2025:

  ಬೆಂಗಳೂರಿನ ಗಾಂಧಿ ಭವನದಲ್ಲಿ 'ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ' ದ ವತಿಯಿಂದ "2025 ನೂತನ ವರ್ಷದ ಕ್ಯಾಲೆಂಡರ್ ಹಾಗೂ ವಾರ್ಷಿಕ ಸಭೆ" ಸಮಾರಂಭ ನಡೆಯಿತು. 

 ಈ ಸಮಾರಂಭವು ರಾಜ್ಯಾಧ್ಯಕ್ಷರಾದ ಸುಧಾಕರ್ ಅವರ ನೇತೃತ್ವದಲ್ಲಿ ನಡೆಯಿತು. 

 ರಾಜ್ಯದ ವಿವಿಧ ಜಿಲ್ಲೆಗಳಿಂದ ಅನೇಕ ಸದಸ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಜತೆಗೆ ಈ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.