ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 'ಅಕ್ಷರ ಕಲ್ಚರಲ್ ಅಕಾಡೆಮಿ'ಯ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ನಡೆಯಿತು.
ಈ ಸಮಾರಂಭದಲ್ಲಿ ಖ್ಯಾತ ನಿರ್ದೇಶಕರಾದ ಎಸ್. ನಾರಾಯಣ್ ಅವರು ಪ್ರಮುಖ ಅತಿಥಿಯಾಗಿ ಭಾಗಿಯಾಗಿದ್ದರು.
ಜತೆಗೆ ಕನ್ನಡ ಹೋರಾಟಗಾರರು ಹಾಗೂ ನಿರ್ಮಾಪಕರಾದ ಸಾ.ರಾ. ಗೋವಿಂದು, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದ ಸುರೇಶ್ ಅವರು ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಸನ್ಮಾನ ಮಾಡಲಾಯಿತು.