ಬೆಂಗಳೂರು, ಫೆಬ್ರವರಿ 22, 2025
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ' ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು.
ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಪ್ರೊ. ಕೆ.ಈ. ರಾಧಾಕೃಷ್ಣ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರೊ. ಕೆ.ಈ. ರಾಧಾಕೃಷ್ಣ ಅವರು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಮಹಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ಎಸ್.ಎನ್. ದೀಕ್ಷಿತ್ ಅವರು ಸಹ ಮಾತನಾಡಿದರು.
ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ. ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ. ಡಿ.ಕೆ. ಶಿವಕುಮಾರ್, ಅವರ ನೇತೃತ್ವದ ಕರ್ನಾಟಕ ಸರ್ಕಾರ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಕ್ಕೆ ತಂದಿದೆ. ಮುಜರಾಯಿ ಇಲಾಖೆ ಮಟ್ಟಿಗೆ ಹೇಳುವುದಾದರೆ ಮಾನ್ಯ ಸಚಿವರಾದ ১৫. ರಾಮಲಿಂಗ ರೆಡ್ಡಿರವರ ಪ್ರಾಮಾಣಿಕಬದ್ಧತೆಯಿಂದಾಗಿ ಮುಜರಾಯಿ ದೇವಸ್ಥಾನಗಳ ಅರ್ಚಕ ಮತ್ತು ಉದ್ಯೋಗಿಗಳ ಹಿತಾಸಕ್ತಿಯನ್ನು ಕಾಪಾಡುವ ವಿಮೆ, ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣ, ಮತ್ತು ಅನುದಾನಗಳ ಬಿಡುಗಡೆಯನ್ನು ಅತ್ಯಂತ ಕಾಳಜಿಯಿಂದ ನಿರ್ವಹಿಸಲಾಗಿದೆ. ಅನೇಕ ಹೊಸ ಯೋಜನೆಗಳನ್ನು ಹಮ್ಮಿಕೊಂಡ ಅವರಿಗೆ ನಾವು ಸದಾಕಾಲ ಕೃತಜ್ಞರಾಗಿದ್ದೇವೆ.
2023ರ ಅಸೆಂಬ್ಲಿ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷ ಹಿರಿಯ ನಾಯಕರಾದ ಡಾ| ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ರಚಿತವಾದ ಪ್ರಣಾಳಿಕೆ ದೇವಸ್ಥಾನಗಳ, ಅರ್ಚಕರ ಮತ್ತು ಉದ್ಯೋಗಿಗಳ ಅಭಿವೃದ್ಧಿಗೆ ವಿಶೇಷವಾದ ಗಮನಹರಿಸಿ ಅಶ್ವಾಸನೆಗಳನ್ನು ನೀಡಿದೆ. ಈ ಪ್ರಣಾಳಿಕೆಯನ್ನು ಎ.ಐ.ಸಿ.ಸಿ.ಯ ಮಾನ್ಯ ಅಧ್ಯಕ್ಷರಾದ ಶ್ರೀ. ಮಲ್ಲಿಕಾರ್ಜುನ್ ಖರ್ಗೆರವರು ಎ.ಐ.ಸಿ.ಸಿ. ಉಸ್ತುವಾರಿ ಮಹಾಕಾರ್ಯದರ್ಶಿಗಳಾದ ಶ್ರೀ. ರಣದೀಪ್ ಸಿಂಗ್ ಸುರ್ಜೆವಾಲಾರವರು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಶ್ರೀ. ಡಿ.ಕೆ. ಶಿವಕುಮಾರ್‌ರವರು ವಿರೋಧಪಕ್ಷದ ನಾಯಕರಾಗಿದ್ದ ಶ್ರೀ. ಸಿದ್ದರಾಮಯ್ಯನವರು ಬಿಡುಗಡೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಣಾಳಿಕೆ ಮುಖ್ಯ ಪಾತ್ರವನ್ನು ವಹಿಸಿದೆ.