ಬೆಂಗಳೂರು, ಫೆಬ್ರವರಿ 28, 2025

  ಬೆಂಗಳೂರಿನ ಜವಾಹರ್‌ ಲಾಲ್‌ ನೆಹರು ತಾರಾಲಯದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಯು.ಆರ್. ರಾವ್ ಭವನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಿದರು. 

ಈ ಭವನವನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಿರ್ಮಿಸಲಾಗಿದೆ. ಈ ವೇಳೆ ನೂತನ ಕಟ್ಟಡದ ಸಭಾಂಗಣದಲ್ಲಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. 

 ಹಾಗೆಯೇ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಹಿನ್ನೆಲೆಯಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾವಿಧಿಯನ್ನು .ಕೆ. ಶಿವಕುಮಾರ್ ಅವರು ಬೋಧಿಸಿದರು.

  ಈ ವೇಳೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಹಾಗೂ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನದ ಚೆಕ್‌, ಪ್ರಮಾಣ ಪತ್ರವನ್ನು ಡಿ.ಕೆ. ಶಿವಕುಮಾರ್ ಅವರು ವಿತರಣೆ ಮಾಡಿದರು.