ಬೆಂಗಳೂರು, ಫೆಬ್ರವರಿ 28, 2025

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ /SCSA / TSA ಜಾಗೃತಿ ವೇದಿಕೆ' ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು. 

ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಸಮುದಾಯವನ್ನು ಕಡೆಗಣಿಸುತ್ತಿದೆ. ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಮೀಸಲಿಟ್ಟ SCTSP ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ಉಪಯೋಗಿಸಿ ಪರಿಶಿಷ್ಟ ಜಾತಿಗಳಿಗೆ ವಂಚನೆ ಎಸಗುತ್ತಿದೆ ಎಂದು ಆರೋಪಿಸಿದರು. 

ಜತೆಗೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಜನರ ಎಲ್ಲಾ ಬೇಡಿಕೆಗಳನ್ನು ಈ ಕೂಡಲೇ ಬಗೆಹರಿಸಬೇಕೆಂದು ಒತ್ತಾಯಿಸಿದರು. 

ಈ ಪ್ರತಿಭಟನೆಯಲ್ಲಿ ದಲಿತ ಹೋರಾಟಗಾರರಾದ ಕೇಶವಮೂರ್ತಿ, ಭೀಮರಾಜ್ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.