ಬೆಂಗಳೂರು, ಫೆಬ್ರವರಿ 28, 2025
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ /SCSA / TSA ಜಾಗೃತಿ ವೇದಿಕೆ' ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಸಮುದಾಯವನ್ನು ಕಡೆಗಣಿಸುತ್ತಿದೆ. ಪರಿಶಿಷ್ಟ ಜಾತಿಗಳ ಅಭಿವೃದ್ಧಿಗೆ ಮೀಸಲಿಟ್ಟ SCTSP ಹಣವನ್ನು ಬೇರೆ ಬೇರೆ ಉದ್ದೇಶಗಳಿಗೆ ಉಪಯೋಗಿಸಿ ಪರಿಶಿಷ್ಟ ಜಾತಿಗಳಿಗೆ ವಂಚನೆ ಎಸಗುತ್ತಿದೆ ಎಂದು ಆರೋಪಿಸಿದರು.
ಜತೆಗೆ ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಗಳ ಜನರ ಎಲ್ಲಾ ಬೇಡಿಕೆಗಳನ್ನು ಈ ಕೂಡಲೇ ಬಗೆಹರಿಸಬೇಕೆಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಕಾರ್ಯಧ್ಯಕ್ಷರಾದ ಕೇಶವಮೂರ್ತಿ, ಕರ್ನಾಟಕ ಭೋಜನ ಚಳುವಳಿ ರಾಜ್ಯಾಧ್ಯಕ್ಷರರಾದ ಕನಿಕೇನಳ್ಳಿ ಕೃಷ್ಣಪ್ಪನವರು, ದಲಿತ ಬಹುಜನ ಚಳುವಳಿಯ ರಾಜ್ಯ ಅಧ್ಯಕ್ಷರಾದ ವೆಂಕಟೇಶ್, ವಿಶ್ವ ಆದಿ ಜಾಂಬವ ಮಹಾಸಭಾ ರಾಜ್ಯಧ್ಯಕ್ಷರಾದ ಡಾಕ್ಟರ್ ಭೀಮರಾಜ್ ಅವರು ಭಾಗಿಯಾಗಿದ್ದರು.