ಬೆಂಗಳೂರು, ಮಾರ್ಚ್ 2, 2025
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿ.ಎಂ. ನರಸಿಂಹರಾಜು ಅವರಿಗೆ 'ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ' ವತಿಯಿಂದ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅನೇಕ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಭದ್ರಾವತಿ ರಾಮಾಚಾರಿ, ಎಸ್. ತಾರಾನಾಥ್, ಪದ್ಮಜಾ ಜೋಯ್ಸ್, ಸುಮಾಲಿನಿ ರಾಮಾಚಾರಿ ಉಪಸ್ಥಿತರಿದ್ದರು.
ಈ ಸಮಾರಂಭವು ಭದ್ರಾವತಿ ರಾಮಾಚಾರಿ ಅವರ ನೇತೃತ್ವದಲ್ಲಿ ನಡೆಯಿತು.