ಬೆಂಗಳೂರು, ಮಾರ್ಚ್ 8, 2025

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ-2025" ಕಾರ್ಯಕ್ರಮ ಆಯೋಜಿಸಲಾಗಿತ್ತು. 

'ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ- ತ್ವರಿತ ಕ್ರಮ' ಘೋಷವಾಕ್ಯದಡಿ ಈ ವರ್ಷದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು. 

ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಉದಯ ಗರುಡಾಚಾರ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪದ್ಮಾವತಿ, ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ, ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷರಾದ ನಾಗಣ್ಣಗೌಡ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪುಷ್ಪಲತಾ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.