ಬೆಂಗಳೂರು, ಮಾರ್ಚ್ 11, 2025
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಸದಸ್ಯರು “ಭೂ ಸತ್ಯಾಗ್ರಹಕ್ಕೆ ಚಾಲನೆ” ನೀಡಿ ಬೃಹತ್ ಪ್ರತಿಭಟನೆ ನಡೆಸಿದರು.
ಭೂಮಿಯ ಹಕ್ಕು ಸಾಮಾಜಿಕ ನ್ಯಾಯದ ಪ್ರತಿಪಾದನೆಗಾಗಿ ಈ ಪ್ರತಿಭಟನೆ ನಡೆಯಿತು.
'ಕರ್ನಾಟಕ ಸಾಮರಸ್ಯ ಸಮಿತಿ'ಯ ರಾಜ್ಯಾಧ್ಯಕ್ಷರಾದ ಕೆ. ಕೃಷ್ಣಪ್ಪ ಅವರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 500 ಕ್ಕೂ ಹೆಚ್ಚು ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.