ಬೆಂಗಳೂರು, ಮಾರ್ಚ್ 13, 2025

ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ' ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. 

   ಈ ಪತ್ರಿಕಾಗೋಷ್ಠಿಯಲ್ಲಿ ಆರ್.ಪಿ.ಐ (B) ಪಕ್ಷದ ರಾಷ್ಟೀಯ ಅಧ್ಯಕ್ಷರಾದ ಡಾ. ಎನ್. ಮೂರ್ತಿ ಅವರು ಮಾತನಾಡಿದರು. 

ರಾಜ್ಯ ಸರ್ಕಾರವು ಈ ಕೂಡಲೇ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳ ಮೀಸಲಾತಿ ನೀಡಬೇಕೆಂದು ಡಾ. ಎನ್. ಮೂರ್ತಿ ಅವರು ಒತ್ತಾಯಿಸಿದರು. 

ದಿನಾಂಕ: 13.03.2025 ರಂದು ಮಧ್ಯಾಹ್ನ 12 ಗಂಟೆಗೆ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಒಳಮೀಸಲಾತಿಯನ್ನು ಕೂಡಲೇ ಜಾರಿ ಮಾಡಲು ಈ ಕೆಳಕಂಡ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು. ಅಲ್ಲದೆ ಈ ಬಗ್ಗೆ ದಿನಾಂಕ: 19.03.2025 ರಂದು ಫ್ರೀಡಂಪಾರ್ಕ್‌ಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.

ಹಕ್ಕೋತ್ತಾಯಗಳು

• ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರದಲ್ಲಿ ಲಭ್ಯವಿರುವ ದತ್ತಾಂಶಗಳನ್ನು ಪರಿಗಣಿಸಿ ವಿಳಂಭ ನೀತಿ ಅನುಸರಿಸದೆ ರಾಜ್ಯ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.

ನ್ಯಾ. ಸದಾಶಿವ ಆಯೋಗದ ವರದಿ ಮತ್ತು ಒಳಮೀಸಲಾತಿ ವರ್ಗಿಕರಣದ ಶಿಫಾರಸ್ಸಗಳನ್ನು ಸಚಿವ ಸಂಪುಟದಲ್ಲಿ ಅಧಿಕೃತಗೊಳಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ. 17 ರ ಅನುಪಾತದಲ್ಲಿ ಹೆಚ್ಚುವರಿ ಶೇ. 2 ಮೀಸಲಾತಿಯನ್ನು ಜಾತಿ ಜನಸಂಖ್ಯೆಗೆ ಅನುಗುಣವಾಗಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ. 7% ಮೀಸಲಾತಿಯನ್ನು ನಿಗಧಿಪಡಿಸಬೇಕು.

• ಸಚಿವ ಸಂಪುಟವು ನಿರ್ಣಯಿಸಿದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರ್ಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು.

ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರ್ತಿಸಿ ಶೇ. 1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ. ಅಲೆಮಾರಿಗಳಿಗೆ ನ್ಯಾಯ ಒದಗಿಸಲು ಪ್ರತ್ಯೇಕ ಅಲೆಮಾರಿ ಆಯೋಗವನ್ನು ಸ್ಥಾಪಿಸಬೇಕು.

• ಸಮಾಜ ಕಲ್ಯಾಣ ಇಲಾಖೆಯ ಬಜೆಟ್‌ನಲ್ಲಿ ಮತ್ತು ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುಧಾನವನ್ನು ಜನಸಂಖ್ಯಾವಾರು ಹಂಚಿಕೆ ಮಾಡಬೇಕು. ಮಾದಿಗ, ಸಮಗಾರ, ಡೋಹರ, ಮಚಗಾರ ಜಾತಿಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ನಿಗಮ ಮಂಡಳಿಗಳಿಗೆ ತಲಾ ಒಂದು ಸಾವಿರ ಕೋಟಿ ಅನುದಾನ ಮೀಸಲಿಟ್ಟು ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು.