ಬೆಂಗಳೂರು, ಮಾರ್ಚ್ 15, 2025
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ'ದ ಸದಸ್ಯರು ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ಈ ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷರಾದ ಡಾ.ಎಲ್.ಭೈರಪ್ಪ ಅವರು ಮಾತನಾಡಿದರು. ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್ ಶ್ರೇನ್ ಸಭಾಂಗಣದಲ್ಲಿ ಏಪ್ರಿಲ್ 4ರಂದು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ "ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶ" ನಡೆಯಲಿದೆ. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘವು ಸಂಘಟನೆಯ ಹಿನ್ನಲೆಯಲ್ಲಿ 3 ವರ್ಷಗಳಿಗೊಮ್ಮೆ "ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಸಮಾವೇಶವನ್ನು ಆಯೋಜನೆ ಮಾಡಿಕೊಂಡು ಬಂದಿರುತ್ತದೆ. ದಿನಾಂಕ:-04-04-2025ರಂದು ಶುಕ್ರವಾರ ಪ್ರಿನ್ಸೆಸ್ ಶ್ರೇನ್ (ಗೇಟ್ ನಂ:-9), ಅರಮನೆ ಆವರಣ, ಬೆಂಗಳೂರಿನಲ್ಲಿ "ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶ"ವನ್ನು ಆಯೋಜಿಸಲಾಗಿದೆ. ಸದರಿ ಕಾರ್ಯಾಗಾರದಲ್ಲಿ ಸರ್ಕಾರದ ಮಾನ್ಯ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಭಾ.ಆ.ಸೇ ರವರು ಭಾಗವಹಿಸಲಿದ್ದಾರೆ. ಮೇಲ್ಕಂಡ ಸಮಾವೇಶಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 30 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನಿವೃತ್ತಿ ನೌಕರರು ಮತ್ತು ಕುಟುಂಬ ಪಿಂಚಣಿದಾರರು ಭಾಗವಹಿಸಲಿದ್ದಾರೆ. ಸದರಿ ಸಮಾವೇಶವನ್ನು ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳಾದ ಗೌರವಾನ್ವಿತ ಶ್ರೀ.ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಮತ್ತು ಮಾನ್ಯ ಉಪ ಮುಖ್ಯ ಮಂತ್ರಿಗಳಾದ ಶ್ರೀ.ಡಿ.ಕೆ.ಶಿವಕುಮಾರರವರು "ಸ್ಮರಣ ಸಂಚಿಕೆ"ಯನ್ನು ಬಿಡುಗಡೆ ಮಾಡಲಿದ್ದಾರೆ. ಹಾಗೂ ಇತರೆ ಸಚಿವ ಸಂಪುಟದ ಸದಸ್ಯರುಗಳು ಭಾಗವಹಿಸಲಿದ್ದಾರೆ. ಈ ಸಂಧರ್ಭದಲ್ಲಿ ಮಾನ್ಯ ಮುಖ್ಯ ಮಂತ್ರಿಗಳಿಗೆ ಸರ್ಕಾರಿ ನಿವೃತ್ತ ನೌಕರರ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಬಂಧಪಟ್ಟಂತೆ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ತರಲಾಗುವುದು. 7ನೇ ವೇತನ ಆಯೋಗವು ತನ್ನ ವರದಿಯಲ್ಲಿ ಈ ಕೆಳಕಂಡ ಅಂಶಗಳನ್ನು ಕೂಡಲೇ ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುತ್ತದೆ. 1. ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ "ನಗದು ರಹಿತ ಆರೋಗ್ಯ ಭಾಗ್ಯ ಯೋಜನೆ”ಯನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ 2 ವರ್ಷಗಳಿಂದಲೂ ಸಂಘವು ಒತ್ತಾಯ ತರಲಾಗಿತ್ತು. ಆದರೂ ಸರ್ಕಾರ ನಗದು ರಹಿತ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿ ಮಾಡದಿರುವ ಹಿನ್ನಲೆಯಲ್ಲಿ ವೇತನ ಆಯೋಗವು ಸಹ “ಸಂಧ್ಯಾ ಕಿರಣ" ಎಂಬ ಹೆಸರಿನ ಹೊಸ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ತನ್ನ ವರದಿಯಲ್ಲಿ ಶಿಫಾರಸ್ಸು ಮಾಡಿರುತ್ತದೆ. 2. 70 ವರ್ಷದಿಂದ 80 ವರ್ಷದೊಳಗೆ ವಯೋಮೀತಿ ಮೀರಿದ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಅವರ ಮೂಲ ಪಿಂಚಣಿಗೆ ಶೇ.10%ರಷ್ಟು ಆರ್ಥಿಕ ಸೌಲಭ್ಯವನ್ನು ನೀಡಬೇಕೆಂದು ವೇತನ ಆಯೋಗವು_ಶಿಫಾರಸ್ಸು ಮಾಡಿರುತ್ತದೆ. 3. ದಿನಾಂಕ:-01-07-2022ರಿಂದ ದಿನಾಂಕ:-31-07-2024ರವರೆಗಿನ ನಿವೃತ್ತಿಯಾಗಿರುವ ಸರ್ಕಾರಿ ನೌಕರರಿಗೆ ಗಳಿಕೆರಜೆ ನಗಧೀಕರಣ, ಡಿ.ಸಿ.ಆರ್.ಜಿ ಮತ್ತು ಕಮ್ಯೂಟೇಷನ್ ಆರ್ಥಿಕ ಸೌಲಭ್ಯವನ್ನು ಮಂಜೂರಾತಿ ನೀಡಬೇಕೆಂದು ಹಾಗೂ 7ನೇ ವೇತನ ಆಯೋಗವು ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಇನ್ನಿತರೆ ಸೌಲಭ್ಯಗಳನ್ನು ಜಾರಿಗೊಳಿಸಬೇಕೆಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಸಂಘವು ಅಗ್ರಹ ಪಡಿಸುತ್ತದೆ.