ಬೆಂಗಳೂರು, ಮಾರ್ಚ್ 18, 2025
ವಕ್ಫ್ ಬೋರ್ಡ್ ಆಸ್ತಿಯನ್ನು ಅಲ್ಪ ಸಂಖ್ಯಾತ ಮುಸ್ಲಿಂ ಸಮುದಾಯದ ಜನರ ಶೈಕ್ಷಣಿಕ ಅಭಿವೃದ್ಧಿಗಳಿಗೆ ಉಪಯೋಗಿಸಲಾಗುತ್ತದೆ ಎಂದು ನೂತನ ಅಧ್ಯಕ್ಷರಾದ ಸಯ್ಯದ್ ಮಹಮ್ಮದ್ ಅಲಿ ಅಲ್ ಹುಸೇನಿ ಅವರು ಮಾಧ್ಯಮಗಳಿಗೆ ತಿಳಿಸಿದರು.
ಪ್ರಾಥಮಿಕ ಶಿಕ್ಷಣದಿಂದ ಕೌಶಲ್ಯಯುತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದು ನಮ್ಮ ಪ್ರಮುಖ ಗುರಿಯಾಗಿದೆ.ವಕ್ಷೆ ಬೋರ್ಡ್ ಆಸ್ತಿಯನ್ನು ಸಂರಕ್ಷಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಯ್ಯದ್ ಹುಸೇನಿ ಅವರು ತಿಳಿಸಿದರು.
ರಾಜ್ಯದ ಅನೇಕ ವಕ್ಷ ಬೋರ್ಡ್ ಆಸ್ತಿಗಳನ್ನು ಬೇರೆಯವರ ಪಾಲಾಗಿದೆ. ಯಾರೇ ವಕ್ಫ್ ಆಸ್ತಿಯನ್ನು ಕಬಳಿಸಿದ್ದರೆ ಕಾನೂನು ವ್ಯಾಪ್ತಿಯಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಬೇಕು. ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಳೆದ ಎರಡು ದಿನಗಳ ಹಿಂದೆ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸಯ್ಯದ್ ಮಹಮ್ಮದ್ ಅಲಿ ಅಲ್ ಹುಸೇನಿ ಕಲಬುರಗಿಯ ಹಜರತ್ ಕ್ವಾಜಾ ಬಂದೇನವಾಜ್ ದರ್ಗಾದ ವ್ಯಾಪ್ತಿಯ ಕಾಲೇಜುಗಳ ಉಪ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.