ಬೆಂಗಳೂರು, ಮಾರ್ಚ್ 20, 2025
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ 'ಕರುನಾಡ ವಿಜಯಸೇನೆ' ವತಿಯಿಂದ 'ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ' ಹಾಗೂ 'ಬೆಳವಾಡಿ ಮಲ್ಲಮ್ಮ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ' ನಡೆಯಿತು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕಿಯರಿಗೆ 'ಬೆಳವಾಡಿ ಮಲ್ಲಮ್ಮ ರಾಜ್ಯ ಪ್ರಶಸ್ತಿ' ನೀಡಿ ಗೌರವಿಸಲಾಯಿತು.
ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಜಿ.ಸುಶೀಲಮ್ಮ ಕರುನಾಡ ವಿಜಯಸೇನೆ ರಾಜ್ಯ ಘಟಕದ ಅಧ್ಯಕ್ಷ ಎಚ್.ಎನ್.ದೀಪಕ್ ಮಾಜಿ ಸಚಿವೆ ರಾಣಿ ಸತೀಶ್ ವಿಜಯ ಸೇನೆ ಮಹಿಳಾ ಘಟಕದ ಅಧ್ಯಕ್ಷೆ ಕೆ.ಗಂಗರಾಜಮ್ಮ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.