ಬೆಂಗಳೂರು, ಮೇ 2, 2025
ಬೆಂಗಳೂರಿನ ಸಚಿವಾಲಯ ಕ್ಲಬ್ ನಲ್ಲಿ 'ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿ' ವತಿಯಿಂದ "ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತೋತ್ಸವ" ಮತ್ತು "ಸ್ಮರಣ ಸಂಚಿಕೆ ಬಿಡುಗಡೆ" ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮವನ್ನು ಡಾ. ಪುರುಷೋತ್ತಮ್ ಬಿಳಿಮಲೆ ಅವರು ಉದ್ಘಾಟನೆ ಮಾಡಿದರು. ಸ್ಮರಣ ಸಂಚಿಕೆಯನ್ನು ಎನ್. ಎಮ್. ನಾಗರಾಜ್ ಅವರು ಬಿಡುಗಡೆ ಮಾಡಿದರು.
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿಯ ಅಧ್ಯಕ್ಷರಾದ ಡಿ. ಶಿವಶಂಕರ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಅನೇಕ ಸಾಧಕರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ ಎಎಸ್ಟಿ ನೌಕರರ ಸಮನ್ವಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.