ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಕೇಂದ್ರದಲ್ಲಿಂದು ʼಕೇಂದ್ರ ರೇಷ್ಮೆ ಮಂಡಳಿ - ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯʼ ಸುವರ್ಣ ಮಹೋತ್ಸವ ಸಮಾರಂಭ ನಡೆಯಿತು.
ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ಸಮಾರಂಭವನ್ನು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಸಿ. ಎನ್. ಮಂಜುನಾಥ್ ಅವರು ಉಪಸ್ಥಿತರಿದ್ದರು.
ಈ ವೇಳೆ ಕೇಂದ್ರ ಸಚಿವೆಯಾದ ಶೋಭಾ ಕರಂದ್ಲಾಜೆ ಅವರು ರೇಷ್ಮೆ ತಳಿಗಳ ಪರಿವೀಕ್ಷಣೆ ನಡೆಸಿದರು.
ಇದೇ ವೇಳೆ, ಸುದೀರ್ಘ 50 ವರ್ಷಗಳ ಕಾಲ ರೇಷ್ಮೆ ಹುಳು ಬೀಜ ಸಂಘಟನೆಯ ಮೂಲಕ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ, ರೇಷ್ಮೆ ಬೆಳೆಗಾರ ರೈತರಿಗೆ ನೆರವಾದ ಸಮಸ್ತ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ, ಕೇಂದ್ರ ರೇಷ್ಮೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಪಿ. ಶಿವಕುಮಾರ್ ಅವರು, ರಾಷ್ಟ್ರೀಯ ರೇಷ್ಮೆ ಹುಳು ಬೀಜ ಸಂಸ್ಥೆಯ ನಿರ್ದೇಶಕರಾದ ಡಾ. ಎಸ್. ಮಂಥಿರಾಮೂರ್ತಿಯವರು ಸೇರಿದಂತೆ ಸಂಸ್ಥೆಯ ಅಧಿಕಾರಿಗಳು ಉಪಸ್ಥಿತರಿದ್ದರು.
 
  
  
  
  