ಮೈಲಾರಿ ಹೋಟೆಲ್ ನ ದೋಸೆಗೆ ಮನಸೋತ ಮುಖ್ಯಮಂತ್ರಿ ಸಿದ್ದರಾಮಯ್ಯ
"ಓಲ್ಡ್ ಒರಿಜಿನಲ್ ವಿನಾಯಕ ಮೈಲಾರಿ ಹೋಟೆಲ್" ಅನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.
ಬೆಂಗಳೂರಿನ ಇಂದಿರಾನಗರದ ಹಳೇ ತಿಪ್ಪಸಂದ್ರದಲ್ಲಿ ನೂತನವಾಗಿ ಆರಂಭಿಸಲಾದ "ಓಲ್ಡ್ ಒರಿಜಿನಲ್ ವಿನಾಯಕ ಮೈಲಾರಿ ಹೋಟೆಲ್" ಅನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು. ಅಲ್ಲದೆ, ಹೋಟೆಲ್‌ನಲ್ಲಿ ಬೆಳಗಿನ ಉಪಹಾರ ಸೇವಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ.
1938ರಲ್ಲಿ ಮೈಸೂರಿನಲ್ಲಿ ಆರಂಭವಾದ ಮೈಲಾರಿ ಹೋಟೆಲ್ ತನ್ನ ರುಚಿ ಹಾಗೂ ಗುಣಮಟ್ಟದ ತಿನಿಸುಗಳಿಗೆ ಹೆಸರುವಾಸಿಯಾಗಿದೆ. ನನ್ನ ಕಾಲೇಜು ದಿನಗಳಲ್ಲಿ ಆಗಾಗ್ಗೆ ಈ ಹೋಟೆಲ್‌ಗೆ ಹೋಗುತ್ತಿದ್ದೆ, ಈಗಲೂ ಮೈಸೂರಿಗೆ ಹೋದ ವೇಳೆ ಬಿಡುವಾದಾಗ ಭೇಟಿ ನೀಡುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.
'ನನ್ನೂರಿನ ಮೈಲಾರಿಯ ರುಚಿಕರ ತಿಂಡಿ ಸವಿಯುವ ಅವಕಾಶ ಬೆಂಗಳೂರಿನ ಜನರಿಗೆ ಈಗ ಸಿಗುತ್ತಿರುವುದು ಖುಷಿಯ ವಿಚಾರ. ಶುಭವಾಗಲಿ' ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಉಪಾಹಾರ ಸವಿಯುತ್ತಿರುವ ಫೋಟೋಗಳನ್ನು ಸಹ ಹಂಚಿಕೊಂಡಿದ್ದಾರೆ.