ಬೆಂಗಳೂರು, ಫೆಬ್ರವರಿ 25, 2026
ಬೆಂಗಳೂರಿನ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಸಮಸ್ಯೆಗಳ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದಸಿ.ಎಸ್. ಷಡಾಕ್ಷರಿ ಅವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ 75 ವರ್ಷಕ್ಕೂ ಮೇಲ್ಪಟ್ಟ ನಿವೃತ್ತ ನೌಕರರಿಗೆ ಅಭಿನಂದನಾ ಸಮಾರಂಭ ನಡೆಯಿತು. 250 ಕ್ಕೂ ಹೆಚ್ಚು ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.
ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಅಧ್ಯಕ್ಷರಾದ ಬೈರಪ್ಪ ಅವರ ನೇತೃತ್ವದಲ್ಲಿ ಈ ಸಮಾರಂಭ ನಡೆಯಿತು.