ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 'ಮಹಿಳಾ ದಿನಾಚರಣೆ ಕಾರ್ಯಕ್ರಮ

ಬೆಂಗಳೂರಿನ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 'ಮಹಿಳಾ ದಿನಾಚರಣೆ' ಕಾರ್ಯಕ್ರಮ ಆಯೋಜಿಸಲಾಗಿತ್ತು. 

ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆರ್‌ಆರ್‌ಸಿಎಂಹೆಚ್ ಕ್ಯಾಂಪಸ್‌ನಲ್ಲಿರುವ ಎಸಿಎಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಮಹಿಳಾ ದಿನಾಚರಣೆ ನಡೆಯಿತು. 

  ಈ ಕಾರ್ಯಕ್ರಮವು ಎ.ಸಿ.ಎಸ್. ಅಧ್ಯಕ್ಷರಾದ ಡಾ. ಎ.ಸಿ. ಷಣ್ಮುಗಂ ಅವರ ಮಾರ್ಗದರ್ಶನದಲ್ಲಿ ನಡೆಯಿತು. ಮೂಗಾಂಬಿಗೈ ಚಾರಿಟೇಬಲ್ & ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷೆ ಶ್ರೀಮತಿ ಎಸ್. ಲಲಿತಾ ಲಕ್ಷ್ಮಿ ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್. ವಿಜಯಾನಂದ ಮತ್ತು ವಿವಿಧ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು. 

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಟಿ ಮೇಘಾ ಶೆಟ್ಟಿ ಅವರು ಭಾಗಿಯಾಗಿದ್ದರು. 

 ಈ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಮತ್ತು ಸಂಸ್ಥೆಯ ಬೆಳವಣಿಗೆಗೆ ಕೊಡುಗೆ ನೀಡಿದ ಮಹಿಳೆಯರನ್ನು ಸನ್ಮಾನಿಸಲಾಯಿತು.