ಬೆಂಗಳೂರು, ಮೇ 27, 2026
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷರಾದ ಡಾ|| ಎನ್. ಮೂರ್ತಿ ಅವರ ನೇತೃತ್ವದಲ್ಲಿ ಪ್ರತಿಭಟನೆಸಂಪೂರ್ಣ ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ದಸಂಸ ರಾಜ್ಯಾಧ್ಯಕ್ಷ, ಆರ್‌ಪಿಐ ರಾಷ್ಟ್ರೀಯ ಅಧ್ಯಕ್ಷ ಡಾ||ಎನ್. ಮೂರ್ತಿ ಅವರ ನೇತೃತ್ವದಲ್ಲಿಂದು ಫ್ರೀಡಂ ಪಾರ್ಕ್ನಲ್ಲಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೀಸಲಾತಿಯಿಂದ ವಂಚಿತರಾದ ಮಾದಿಗ ಸಮುದಾಯಗಳಿಗೆ ಸಮಾನ ಪ್ರತಿಭಟನೆಯಲ್ಲಿ ಮಾತನಾಡಿದ ಡಾ. ಎನ್. ಮೂರ್ತಿ ಅವರು, ಕಳೆದ 75 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳಿಗೆ ಒದಗಿಸಲಾದ ಅವಕಾಶಗಳನ್ನು ಒದಗಿಸಿಕೊಡುವ ಏಕೈಕ ಉದ್ದೇಶದಿಂದಒಳಮೀಸಲಾತಿ ವ್ಯವಸ್ಥೆತಂದಿದೆ.ಸುಪ್ರೀಂಕೋರ್ಟ್ 7 ಜನ ನ್ಯಾಯಾಧೀಶರ ತೀರ್ಪು ಬಂದು 2 ವರ್ಷವಾಗಿದೆ. ಆಂಧ್ರ, ತೆಲಂಗಾಣ, ತಮಿಳುನಾಡು, ಪಂಜಾಬ್, ಹರಿಯಾಣ ಇತರೆ
ರಾಜ್ಯಗಳು ತತ್ ಕ್ಷಣ ಒಳಮೀಸಲಾತಿ ಜಾರಿಗೊಳಿಸಿವೆ. ಆದರೆ ರಾಜ್ಯದಲ್ಲಿ ನ್ಯಾಯಾಧೀಶರಾದಸದಾಶಿವ ಆಯೋಗ, ನಾಗಮೋಹನದಾಸ್ ಆಯೋಗ ಹಾಗೂ ಜೆ.ಸಿ. ಮಾಧುಸ್ವಾಮಿ ವರದಿಯನ್ನು ಸರ್ಕಾರ ತಳ್ಳಿ ಹಾಕಿತು. ಒಳಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದು ಬೀಸುವ ದೊಣ್ಣೆ ಏಟಿಗೆ ತಪ್ಪಿಸಿಕೊಳ್ಳಲು ರಾಜಕೀಯ ನಡೆಯ ಒಳಮೀಸಲಾತಿ ಜಾರಿಗೆ ತಂದಿರುವುದಾಗಿ ಬೀಗುತ್ತಿದೆ ಎಂದು ಡಾ|| ಎನ್. ಮೂರ್ತಿ ಅವರು ಕಿಡಿಕಾರಿದರು.
ಸರ್ಕಾರ 2026ರ ಮೇ 8ರಂದು ಒಳ ಮೀಸಲಾತಿ ಜಾರಿಗೊಳಿಸಿ ಹೊರಡಿಸಿರುವ ಅಧಿಸೂಚನೆಯು ಕಾನೂನುಬಾಹಿರ ಹಾಗೂ ಅವೈಜ್ಞಾನಿಕ ಮತ್ತು ಗೊಂದಲದ ಗೂಡಾಗಿದೆ. ಈ ಮೂಲಕ ಒಳ ಮೀಸಲಾತಿಯ ಉದ್ದೇಶ ವಿಫಲವಾಗಿದೆ ಎಂದು ಅವರು ಆರೋಪಿಸಿದರು.
ಮಾದಿಗ ಪ್ರತಿಭಟನೆಯಲ್ಲಿ ಸಂಘಟನೆಗಳ ಒಕ್ಕೂಟದ ಸಹಸ್ರಾರು ಮಂದಿ ಮುಖಂಡರು, ಕಾರ್ಯಕರ್ತರುಗಳುಭಾಗವಹಿಸಿದ್ದರು.